ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ದುರಂತ ; ಸ್ಟೋಟದಲ್ಲಿ 6 ಮಂದಿ ಕಾರ್ಮಿಕರು ಮೃತ್ಯು-ಕಹಳೆ ನ್ಯೂಸ್
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಹಿರೇನಾಗವೇಲಿ ಗ್ರಾಮದ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಓರ್ವ ಹೀರೇನಾಗವಲ್ಲಿ ಗ್ರಾಮ, ಆಂಧ್ರ ಪ್ರದೇಶದ ಮೂವರು, ನೇಪಾಳದ ಒಬ್ಬರು, ಬಾಗೇಪಲ್ಲಿಯ ಒಬ್ಬ ಕಾರ್ಮಿಕರು ಆಗಿದ್ದಾರೆ. ಸ್ಥಳಕ್ಕೆ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿಣ ಡಾ.ಕೆ.ಸುಧಾಕರ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.