ಸುಬ್ರಹ್ಮಣ್ಯ : ಕ.ಸಾ.ಪ. ಕಡಬ ತಾಲೂಕು ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು ಅವರು ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಎನ್. ರವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಎಸ್ ಅಂಗಾರ ದೀಪ ಪ್ರಜ್ವಲನೆ ಮಾಡಲಿದ್ದು, ಸಮ್ಮೇಳನವನ್ನು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವರದರಾಜ ಚಂದ್ರಗಿರಿ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರರವರು ಆಶಯ ನುಡಿ ನುಡಿಯಲಿದ್ದಾರೆ. ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಡಾ.ಸೀತಾರಾಮ ಪಲ್ಲೋಡಿ ಇವರ ಕಾಡು ನುಡಿ ನಾಡು ಕವನ ಸಂಕಲನವನ್ನು ಪುತ್ತೂರು ಕೆ.ಎ.ಎಸ್. ಉಪವಿಭಾಗಾಧಿಕಾರಿಗಳು ಡಾ| ಯತೀಶ್ ಕುಮಾರ್ ಉಳ್ಳಾಲ್ ಬಿಡುಗಡೆಗೊಳಿಸಲಿದ್ದಾರೆ. ಪುಸ್ತಕ ಪ್ರದರ್ಶನ ಉದ್ಘಾಟನೆಯನ್ನು ಜಿ.ಪಂ.ಸದಸ್ಯೆ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ನೆರವೇರಿಸಲಿದ್ದು, ಮುಖ್ಯ ಆತಿಥಿಗಳಾಗಿ ಎಸ್.ಪಿ.ಮಹಾದೇವ್, ನವೀನ್ಕುಮಾರ್ ಭಂಡಾರಿ, ಶ್ರೀಮತಿ ಜಯಂತಿ ಆರ್.ಗೌಡ, ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯಕುಮಾರ್, ಸ್ವಾಗತ ಸಮಿತಿ ಅಧ್ಯಕ್ಷ ರಾಜೇಶ್ ಎನ್. ಎಸ್. ಕಾರ್ಯದರ್ಶಿ ಉದಯಕುಮಾರ್ ಉಪಸ್ಥಿತರಿದ್ದರು.