Monday, January 27, 2025
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯ ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪುತ್ತೂರು ಉಲಾರ್ಂಡಿ ನಿವಾಸಿ, 34 ವರ್ಷದ ಜನಾರ್ದನ್ ಎನ್. ಎಂದು ತಿಳಿದುಬಂದಿದೆ. ಇವರು ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮದ್ಯ ವ್ಯಸನಿಯಾಗಿದ್ದ ಇವರು ಆದಿತ್ಯವಾರ ರಾತ್ರಿ ಉಪ್ಪಿನಂಗಡಿ ಕೆಂಪಿ ಮಜಲು ಎಂಬಲ್ಲಿನ ಅರಣ್ಯ ಇಲಾಖಾ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಸುಮನ ಅವರು ಉಪ್ಪಿನಂಗಡಿ ಪೆÇಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು