Sunday, November 24, 2024
ಹೆಚ್ಚಿನ ಸುದ್ದಿ

7ನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಮೋಹನ ದೇಲ್ಕರ್ ಹೊಟೇಲ್‍ನಲ್ಲಿ ಆತ್ಮಹತ್ಯೆ-ಕಹಳೆ ನ್ಯೂಸ್

ಮುಂಬೈ : ಮುಂಬೈ ನ ಮರೀನ್ ಡ್ರೈವ್ ನ ಹೊಟೇಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಂಸದರೋರ್ವರ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡವರು ದಾದ್ರಾ ಮತ್ತು ನಗರ ಹವೇಲಿಯ ಪಕ್ಷೇತರ ಸಂಸದ 58 ವರ್ಷದ ಮೋಹನ ದೇಲ್ಕರ್ ಎಂದು ತಿಳಿದುಬಂದಿದೆ. ಇವರು ಹೊಟೇಲ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. 7ನೇ ಬಾರಿಗೆ ಸಂಸದರಾಗಿದ್ದ ದೇಲ್ಕರ್ ಸದ್ಯ ಪಕ್ಷೇತರ ಸಂಸದರಾಗಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್ ನಲ್ಲಿದ್ದು, ಬಳಿಕ 2019ರಲ್ಲಿ ದಾದ್ರಾ ಮತ್ತು ನಗರ ಹವೇಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವರು, ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣಕ್ಕಿಳಿದು ಜಯಗಳಿಸಿದ್ದರು. ಸದ್ಯ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಇವರ ಸಾವಿಗೆ ನಿಜವಾದ ಕಾರಣ ಏನು ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಸಿಬ್ಬಂದಿಯಿಂದ ಪೆÇಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು