Recent Posts

Sunday, January 19, 2025
ಹೆಚ್ಚಿನ ಸುದ್ದಿ

ಉತ್ತರಾಖಂಡದ ದುರಂತದಲ್ಲಿ ನಾಪತ್ತೆಯಾಗಿದ್ದ 136 ಮಂದಿ ಮೃತಪಟ್ಟಿದ್ದಾರೆಂದು ಘೋಷಣೆ; ಉತ್ತರಾಖಂಡ ಆರೋಗ್ಯ ಇಲಾಖೆ-ಕಹಳೆ ನ್ಯೂಸ್

ಚಮೋಲಿ : ಉತ್ತರಾಖಂಡ ಆರೋಗ್ಯ ಇಲಾಖೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಬಳಿಕ ಉಂಟಾದ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 136 ಮಂದಿಯನ್ನು ಮೃತಪಟ್ಟಿದ್ದಾರೆಂದು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದುರಂತದಲ್ಲಿ ಕಾಣೆಯಾದ 204 ಮಂದಿಯಲ್ಲಿ ಈಗಾಗಲೇ 69 ಮೃತದೇಹಗಳನ್ನು ರಕ್ಷಣಾ ಪಡೆಯ ಅಧಿಕಾರಿಗಳು ಪತ್ತೆಹಚ್ಚಿದ್ದು, 136 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರನ್ನು ಈಗ ಅಧಿಕಾರಿಗಳು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ. ರಾಜ್ಯ ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿ ನಾಪತ್ತೆಯಾದವರು ಕುಟುಂಬಕ್ಕೆ ಮರಣ ಪ್ರಮಾಣ ಪತ್ರವನ್ನು ಹಸ್ತಾಂತರಿಸಲು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು