Monday, January 27, 2025
ಹೆಚ್ಚಿನ ಸುದ್ದಿ

ನಾವೇ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡುವಂತೆ ಹೈಕಮಾಂಡ್‍ಗೆ ನಾವು ಶಿಫಾರಸು ಮಾಡಿದ್ದೇವೆ; ಲಕ್ಷ್ಮೀ ಹೆಬ್ಬಾಳ್ಕರ್- ಕಹಳೆ ನ್ಯೂಸ್

ಬೆಳಗಾವಿ : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾವೇ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದ್ದು, ಅವರನ್ನು ಮಂತ್ರಿ ಮಾಡುವಂತೆ ಹೈಕಮಾಂಡ್‍ಗೆ ನಾವು ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನೇ ಲಕ್ಮ್ಮೀ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿದ್ದು ಎಂದು ಹೇಳಿದ್ದ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ಯಾವತ್ತೂ ಅಭಿವೃದ್ದಿ ಪರ ರಾಜಕಾರಣ ಮಾಡಬೇಕೇ ಹೊರತು ದ್ವೇಷದ ರಾಜಕಾರಣ ಮಾಡಬಾರದು. ಇದು ಶೋಭೆ ತರುವುದಿಲ್ಲ. ಅವರಿಗೆ ದೇವರು ಒಳ್ಳೆದನ್ನೇ ಮಾಡಲಿ ಎಂದಿದ್ದಾರೆ. ಇಹಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಸ್ ನಿಲ್ದಾಣ ಹುಡುಕಬೇಕಾಗುತ್ತದೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, “ನಾನು ರಾಮ ಭಕ್ತೆ. ರಾಮಮಂದಿರ ನಿರ್ಮಾಣಕ್ಕೆ 2 ಲಕ್ಷ ದೇಣಿಗೆ ನೀಡಿದ್ದೇನೆ. ರಾಮನ ಪಕ್ಷದಲ್ಲಿ ಓರ್ವ ಮಹಿಳೆಯ ಬಗ್ಗೆ ಆಡುತ್ತಿರುವ ಮಾತುಗಳನ್ನು ಜನರು ನೋಡುತ್ತಿರುತ್ತಾರೆ. ಆಕೆ, ಈಕೆ ಎಂದು ಹೇಳುವುದು, ಬಸ್ ನಿಲ್ದಾಣ ಹುಡುಕಬೇಕು ಎಂದು ಹೇಳುವುದು ಸೂಕ್ತವಲ್ಲ” ಎಂದು ಕಿಡಿಕಾರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು