ಮಾರ್ಚ್ 21 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಹಿಂದು ಐಕ್ಯತಾ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ- ಕಹಳೆ ನ್ಯೂಸ್
ಪುತ್ತೂರು : ಫೆಬ್ರವರಿ 24 ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ಮಾರ್ಚ್ 21 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಹಿಂದು ಐಕ್ಯತಾ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹಿಂದು ಜಾಗರಣಾ ವೇದಿಕೆ ಪುತ್ತೂರು ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕುಂಜಾಡಿ , ತಾಲೂಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ , ಹಿಂದು ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ್ ಪ್ರಮುಖ್ ರವಿರಾಜ್ ಕಡಬ, ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್, ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜನ ಗರ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ವಿಭಾಗ ಸಂಪರ್ಕ್ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ನಗರ ಅಧ್ಯಕ್ಷ ಪುಷ್ಪರಾಜ್ , ಹಿಂದು ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ನಗರ ಅಧ್ಯಕ್ಷ ಪುಷ್ಪರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.