Recent Posts

Monday, January 20, 2025
ಹೆಚ್ಚಿನ ಸುದ್ದಿ

ಕೇರಳದಲ್ಲಿ ಮತ್ತೆ ರಕ್ತಪಾತ; ಆರ್‍ಎಸ್‍ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಾರ್ಯಕರ್ತರು ಅರೆಸ್ಟ್ –ಕಹಳೆ ನ್ಯೂಸ್

ಆಲಪ್ಪುಳ : ಆರ್‍ಎಸ್‍ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಡಿಪಿಐನ ಎಂಟು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ರಾತ್ರಿ ಆಲಪ್ಪುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಎಸ್‍ಡಿಪಿಐ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಆರ್‍ಎಸ್‍ಎಸ್ ಕಾರ್ಯಕರ್ತ 23 ವರ್ಷದ ನಂದು ಯಾನೆ ರಾಹುಲ್ ಕೃಷ್ಣ ಎಂಬವರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಎಸ್‍ಡಿಪಿಐ ಮತ್ತು ಆರ್‍ಎಸ್‍ಎಸ್‍ನ ಆರು ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಎರ್ನಾಕುಲಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಆರ್‍ಎಸ್‍ಎಸ್‍ನ ಒಬ್ಬ ಕಾರ್ಯಕರ್ತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ತಮ್ಮ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಬಿಜೆಪಿಯು ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಹರತಾಳ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು