Monday, January 20, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾ ರಥೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ ಮತ್ತು ಕೊಯಿಲ ಗ್ರಾಮದ ಗ್ರಾಮದೇವತೆ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ರಾತ್ರಿ ಮಹಾ ರಥೋತ್ಸವ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ಮೂಲಕ ಜಾತ್ರೆ ಆರಂಭಗೊಂಡು, ನಡುಬಲಿ ಉತ್ಸವ, ಚಂದ್ರ ಮಂಡಲೋತ್ಸವ, ಯಕ್ಷಗಾನ ಬಯಲಾಟ, ಭಜನೆ, ರಂಗಪೂಜೆ, ಚಂಡಿಕಾಯಾಗ, ಧೂಮಾತಿ ದೈವದ ನೇಮೋತ್ಸವ ಸಹಿತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಸಮಾಪನಗೊಂಡಿತು. ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ, ನಡ್ವಂತಾಡಿ ಉದಯ ಪಾಂಗಣ್ಣಾಯ ತಂತ್ರಿ, ಪ್ರಧಾನ ರ್ಚಕ ಎ.ರಾಜ್ ಭಟ್, ರ್ಚಕ ಹರೀಶ ಭಟ್, ಮಂಗ್ಲಿಮಾರ್ ಕ್ಷೇತ್ರದ ಆಡಳಿತ ಮೊಕ್ತೇಸರ ರವಿಶಂಕರ ಶೆಟ್ಟಿ ಬಡಾಜೆಗುತ್ತು, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಜಗಧೀಶ ಆಳ್ವ ಅಗ್ಗೊಂಡೆ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು