Tuesday, November 19, 2024
ಸುದ್ದಿ

ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡ ದುಬಾರಿ ಕಾರು ಮಂಗಳೂರು ಸಿಸಿಬಿ ಪೊಲೀಸರಿಂದ ಮಾರಾಟ ಆರೋಪ; ಸಿಐಡಿ ತನಿಖೆಗೆ ಆದೇಶ-ಕಹಳೆ ನ್ಯೂಸ್

ಮಂಗಳೂರು : ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡ ದುಬಾರಿ ಕಾರುಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮಾರಾಟ ಮಾಡಿದ್ದಾರೆ ಎನ್ನಲಾದ ಪ್ರಕರಣದ ಸಮಗ್ರ ತನಿಖೆಗೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಸಿಐಡಿ ತನಿಖೆಗೆ ಆದೇಶ ನೀಡಿದ್ದಾರೆ. ಜಿಲ್ಲೆಯ ಕಡಬ ಸಮೀಪದ ಉದನೆಯಲ್ಲಿ ಹಣ ಡಬ್ಲಿಂಗ್ ಆರೋಪ ಹಿನ್ನೆಲೆಯಲ್ಲಿ ಕೇರಳ ಮೂಲದ ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಧಿತರಿಂದ ಮೂರು ದುಬಾರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ನಾರ್ಕೋಟಿಕ್ ಠಾಣೆಯ ಪೊಲೀಸರು ಬಿಎಂ ಡಬ್ಲ್ಯು, ಪೋರ್ಷ್  ಹಾಗೂ ಜಾಗ್ವಾರ್ ಕಾರನ್ನು ವಶಕ್ಕೆ ಪಡೆದಿದ್ದರು. ಇದರ ಪೈಕಿ 50 ಲಕ್ಷ ಮೌಲ್ಯದ ಜಾಗ್ವಾರ್ ಕಾರನ್ನು ಮಾರಾಟ ಮಾಡಲಾಗಿತ್ತು. ಇದರಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು