Monday, January 20, 2025
ಪುತ್ತೂರು

ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ-ಕಹಳೆ ನ್ಯೂಸ್‍

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕಿಯರ ವಿಭಾಗದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಕೃತಿಕಾ, ಭಾರ್ಗವಿ ಬಿ.ಬಲ್ಲಾಲ್, ಚೈತನ್ಯ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸಮೀಕ್ಷಾ ಎಸ್ ರೈ, ಪ್ರಜ್ಞಾ ಕೆ, ಶ್ರವಣ, ತೇಜಸ್ವಿನಿ ವಿ ಶೆಟ್ಟಿ, ವಿಜ್ಞಾನ ವಿಭಾಗದ ಸಹನಾ ಎಸ್.ಪಿ, ಭಾಗವಹಿಸಿದ್ದರು. ಈ ಸ್ಫರ್ಧೆಯಲ್ಲಿ ಕೃತಿಕಾರವರು ಬೆಸ್ಟ್‍ಕ್ಯಾಚರ್ ಪ್ರಶಸ್ತಿಯನ್ನು ಕೂಡ ಗಳಿಸಿದ್ದಾರೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.