ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್
ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ.
ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದ ಪೂಜಾ ಪದ್ಧತಿ ಯನ್ನು ಮುಂದುವರಿಸಬೇಕು.
ಆಚರಣೆಯಲ್ಲಿ ಭಿನ್ನವಾದರೆ ದೇವಸ್ಥಾನ ಅದನ್ನು ಒಪ್ಪಿಕೊಳ್ಳುವುದಿಲ್ಲ. ಪ್ರತಿಷ್ಠಾ ಕಾಲದಲ್ಲಿ ಪೂಜೆ ಯಾವ ರೀತಿ ಆರಂಭವಾಗಿದೆ ಅದು ಹಾಗೆಯೇ ಮುಂದುವರೆಯಬೇಕು. ಯಾವುದೇ ವ್ಯತ್ಯಾಸಗಳು ಆದರೆ ದೋಷ ಬರುತ್ತದೆ.
ನನಗೆ ರುದ್ರನ ಮೇಲೆ ದ್ವೇಷ ಇಲ್ಲ. ನಾನು ರುದ್ರ ಪಾರಾಯಣ ಮಾಡುತ್ತೇನೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾನು ರುದ್ರ ಪಾರಾಯಣ ಮಾಡಿಸುತ್ತಿದ್ದೆ ಎಂದು ಹೇಳಿದರು.