ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-ಕಹಳೆ ನ್ಯೂಸ್
ಫೆಬ್ರವರಿ 28ರಂದು ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವಿದ್ಯಾಭಾರತಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಿ ಆರ್ ಜಗದೀಶ್, ಇವರು ಮಾತನಾಡಿ ವಿಜ್ಞಾನ ದಿನಾಚರಣೆಯ ಮೂಲ ಚಿಂತನೆ ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಮೂಡಿಸುವುದು.
ವಿಜ್ಞಾನದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ, ಆತ್ಮಬಲ ವೃದ್ಧಿಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್‍ಎನ್, ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ವಸಂತ ಬಲ್ಲಾಳ್, ಶ್ರೀರಾಮ ಪ್ರೌಢಶಾಲಾ ವಿಭಾಗದ ಅಧ್ಯಾಪಕಿಯಾದ ಶಾಂಭವಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವಂಶಿ ಹಾಗೂ ಶ್ರಮಿಕಾ ವಿಜ್ಞಾನ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿಜ್ಞಾನ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಪತ್ರವಾಚನ, ರಸಪ್ರಶ್ನೆ, ಗಣಿತ ಮತ್ತು ವಿಜ್ಞಾನ ಮಾದರಿ ಪ್ರದರ್ಶನ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಾದ ಅಮೃತಾ ಸ್ವಾಗತಿಸಿ, ಮಧುಶ್ರೀ ನಿರೂಪಿಸಿ, ವಿಂದ್ಯಾ ವಂದಿಸಿದರು.