Friday, September 20, 2024
ಸುದ್ದಿ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು : ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷ ಶೇಖರ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಕಾಲೇಜಿನ ದಿನಗಳ ಸೇವಾ ಯೋಜನೆಯ ಅನುಭವ ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿ ಡಾ ಪಿ ದಯಾನಂದ ಪೈ-ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶೇಷಪ್ಪ ಅಮೀನ್ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ, ಹಾಗೂ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಎನ್ಎಸ್ಎಸ್ ಹೇಗೆ ಸಹಕಾರಿ ಎಂದು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರೇಣುಕಾ ಕೆ. ವಹಿಸಿದ್ದರು. ಯೋಜನಾಧಿಕಾರಿ ಯತೀನ್ ಸೂಟರ್ಪೇಟೆ ಸ್ವಾಗತಿಸಿದರು. ಮಿಥುನ್ ಆರ್ ಕೆ ವಂದಿಸಿದರೆ, ಚೈತ್ರ ಕಾರ್ಯಕ್ರಮ ನಿರೂಪಿಸಿದರು.