Monday, January 20, 2025
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಮಾರ್ಚ್ 5ರಂದು ರಂಗ ವಿಮರ್ಶಾ ಕಮ್ಮಟ-ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಐಕ್ಯುಎಸಿ ಘಟಕ ಹಾಗೂ ಪತ್ರಿಕೊದ್ಯಮ ವಿಭಾಗಗಳ ಆಶ್ರಯದಲ್ಲಿ ಒಂದು ದಿನದ ರಂಗ ವಿಮರ್ಶಾ ಕಮ್ಮಟವನ್ನು ಮಾರ್ಚ್ 5ರಂದು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೂರ್ವಾಹ್ನ 10 ಗಂಟೆಗೆ ಆರಂಭವಾಗಲಿರುವ ಕಮ್ಮಟಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ನಾಟಕ ಅಕಾಡಮಿಯ ಅಧ್ಯಕ್ಷ ಪ್ರೊ. ಭೀಮಸೇನ ಆರ್. ವಹಿಸಲಿರುವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ವೇದಿಕೆಯಲ್ಲಿ ಮುಖ್ಯ ಅಭ್ಯಾಗತರಾಗಿ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್‍ರೈ, ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ್ ಪೈ, ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್‍ಕುಮಾರ್ ನಾಳ, ರಾಜ್ಯ ಪ್ರಶಸ್ತಿ ಪುರಸ್ಕøತ ನಟ ಎಂ.ಕೆ.ಮಠ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ನಂತರದಲ್ಲಿ ಎರಡು ಗೋಷ್ಠಿಗಳು ಹಾಗೂ ‘ಅಶ್ವಪರ್ವ’ ನಾಟಕ ಪ್ರದರ್ಶನ ನಡೆಯಲಿದೆ. ಹಿರಿಯ ಪತ್ರಕರ್ತ ಪಿ. ಬಿ. ಹರೀಶ್‍ರೈ ಹಾಗೂ ವಿಜಯ್‍ಕುಮಾರ್ ಕೊಡಿಯಾಲ್‍ಬೈಲು ಕ್ರಮವಾಗಿ ‘ರಂಗಾವಲೋಕನ’ ಹಾಗೂ ‘ಇಂದಿನ ದಿನಗಳಲ್ಲಿ ತುಳು ರಂಗಭೂಮಿಯ ಸ್ಥಿತಿಗತಿ’ ಎಂಬ ವಿಚಾರಗಳ ಕುರಿತಾಗಿ ವಿಷಯ ಮಂಡನೆ ಮಾಡಲಿದ್ದಾರೆ. ಕಮ್ಮಟದ ಕೊನೆಯ ಹಂತವಾಗಿ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ.

ಹಿರಿಯ ಪತ್ರಕರ್ತ ಪ್ರೊ.ವಿ.ಬಿ. ಅರ್ತಿಕಜೆ ಸಮಾರೋಪ ಭಾಷಣ ಮಾಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಪ್ರಶಸ್ತಿ ಪತ್ರ ವಿತರಿಸಲಿರುವರು. ಮುಖ್ಯ ಅಭ್ಯಾಗತರಾಗಿ ಹಿರಿಯ ಪತ್ರಕರ್ತ ಯು.ಎಲ್. ಉದಯಕುಮಾರ್ ಭಾಗವಹಿಸುವರು.