ಬೆಂಗಳೂರು : ಕರ್ನಾಟಕ ಗೃಹ ಸಚಿವ ಬಸವರಾಜು ಬೊಮ್ಮಾಯಿ ಅವರು, ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಹಾಗೆಯೇ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಎಲ್ಲಾ ವಿಚಾರವೂ ಚರ್ಚೆ ಇದೆ. ಪಕ್ಷವು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಅವರ ವಿರುದ್ದ ಇರುವ ಆರೋಪದ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು. ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿಯನ್ನು ಮಂಗಳವಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಬಿಡುಗಡೆ ಮಾಡಿದ್ದು, ಜಲಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ರಮೇಶ್ ಜಾರಕಿಹೊಳಿ ಲೈಂಗಿಕ ಕಿರುಕುಳ ನೀಡಿದ್ದಾರೆ, ಅಧಿಕಾರ ದುರ್ಬಳಕೆ ಮಾಡಿ ಕಿರುಕುಳ ನೀಡಿ, ಬೆದರಿಕೆ ಹಾಕಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.