Recent Posts

Monday, January 20, 2025
ಬೆಂಗಳೂರು

ರಮೇಶ್ ಜಾರಕಿಹೊಳಿ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ, ಕೈ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ಸೆಕ್ಷ್ ಸಿಡಿಯಲ್ಲಿ ಕಾಣಿಸಿಕೊಂಡ ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಕಾರಣದಿಂದ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿದೆ. ಹಾಗೆಯೇ ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್,ಕೆ. ರಂಗನಾಥ್, ಪ್ರವೀಣ್, ಕಿರಣ್ ಮೊದಲಾದವರು ಭಾಗವಹಿಸಿದ್ದರು. ಇತ್ತ ಯುವ ಘಟಕದಿಂದಲೂ ಪ್ರತಿಭಟನೆ ಮಾಡಿದರು.