Tuesday, January 21, 2025
ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾರ್ಚ್ 5 ರಂದು ಕೆರಿಯರ್ ಡೇ-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ವವಿದ್ಯಾಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಬ್ಯೂರೋ (ಯುಇಐಜಿಬಿ) ಮಾರ್ಚ್ 5 (ಶುಕ್ರವಾರ) ರಂದು ಮಂಗಳಾ ಕ್ರೀಡಾಂಗಣದಲ್ಲಿ ಕ್ಯಾರಿಯರ್ ಡೇ ಕಾರ್ಯಕ್ರಮ ಆಯೋಜಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‍ಸಿ) ಸದಸ್ಯ ಡಾ. ರೊನಾಲ್ಡ್ ಅನಿಲ್ ಫೆರ್ನಾಡಿಸ್ ಬೆಳಗ್ಗೆ 9.45 ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ್ಯಾರಿಯರ್ ಡೇ ಯ ಭಾಗವಾಗಿ ಬಂಟ್ವಾಳ ತಹಶೀಲ್ದಾರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ರಶ್ಮಿ ಎಸ್ ಆರ್ (ಕೆಎಎಸ್), ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಹಿರಿಯ ಕಾರ್ಯನಿರ್ವಾಹಕ ಶಿಜೋಮೊನ್ ಯೇಸುದಾಸ್, ಯುಇಐಜಿಬಿ ಉಪ ಮುಖ್ಯಸ್ಥ ಹೇಮಚಂದ್ರ ಎಸ್ ಜೆ, ಮುಖ್ಯಸ್ಥೆ ಡಾ. ಪ್ರೀತಿ ಕೀರ್ತಿ ಡಿʼಸೋಜ ಅವರು ವಿವಿಧ ವಿಷಯಗಳ ಕುರಿತು ಮಾತನಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಆಡಳಿತ) ಕೆ ರಾಜು ಮೊಗವೀರ, ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು