Tuesday, January 21, 2025
ಕಡಬ

ಕಡಬದಲ್ಲಿ ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ; ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು-ಕಹಳೆ ನ್ಯೂಸ್

ಕಡಬ : ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ ನಡೆಸಿ, ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ತಡ ರಾತ್ರಿ ಮೂರು ವಾಹನಗಳಲ್ಲಿ ಸಂಚಾರಿ ದಳದ ಸಂಧ್ಯಾ ಅವರ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಸಾದ್ ಅವರು ಅಕ್ರಮವಾಗಿ ಮರ ಕಡಿದು ಮನೆಯಲ್ಲಿ ಶೇಖರಣೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು, ಪ್ರಸಾದ್ ಅವರ ಮನೆಗೆ ದಾಳಿ ನಡೆಸಿದಾಗ ಹೆಬ್ಬಲಸು ಮರಗಳು ದೊರೆತಿದೆ, ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ. ಸಬ್ರಹ್ಮಣ್ಯ ಅರಣ್ಯ ವಲಯದ ಐತ್ತೂರು ಗ್ರಾಮದ ರಕ್ಷಿತಾರಣ್ಯದಿಂದ ಕೋಟ್ಯಾಂತರ ರೂ. ಮೌಲ್ಯದ ಮರಗಳನ್ನು ಲೂಟಿ ಮಾಡಲಾಗಿದೆ, ಇದರಲ್ಲಿ ಸ್ಥಳೀಯ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಪ್ರಸಾದ್ ಅವರು ಅರಣ್ಯ ಸಚಿವಾಲಯಕ್ಕೆ ದೂರು ನೀಡಿದ್ದು, ಸಂಚಾರಿ ದಳದ ಅಧಿಕಾರಿಗಳು ಇತ್ತೀಚೆಗೆ ತನಿಖೆ ಕೈಗೆತ್ತಿಕೊಂಡಿದ್ದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಲೂಟಿ ವಿಚಾರ ರಾಜ್ಯಾಧ್ಯಂತ ಸುದ್ದಿಯಾಗಿತ್ತು. ಇದೀಗ ಮತ್ತೆ ಅಧಿಕಾರಿಗಳು ದೂರುದಾರನ ವಿರುದ್ದವೇ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು