Sunday, November 24, 2024
ಪುತ್ತೂರು

ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುತ್ತದೆ, ವಿದ್ಯಾರ್ಥಿ ನಾಯಕರು ವಿದ್ಯಾರ್ಥಿಗಳ ವರ್ತನೆಯಲ್ಲಿ ಧನಾತ್ಮಕ ಬದಲಾವಣೆಗಳನ್ನು ತಂದು ಅವರ ಹಾಗೂ ಕಾಲೇಜಿನ ಏಳಿಗೆಗೆ ಶ್ರಮಿಸಬೇಕೆಂದು ಅಂಬಿಕಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕರೆಕೊಟ್ಟರು. ಅವರು ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಪುತ್ತೂರಿನ ಜೀನಿಯಸ್ ಚೆಸ್ ಅಕಾಡೆಮಿಯ ಸಂಸ್ಥಾಪಕ ಸತ್ಯಪ್ರಕಾಶ್ ಕೋಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿ ಸಂಘವು ಕಾಲೇಜಿನ ಆಧಾರಸ್ತಂಭ, ವಿದ್ಯಾರ್ಥಿ ನಾಯಕರುಗಳು ಅವಕಾಶವನ್ನು ದುರುಪಯೋಗಗೊಳಿಸದೆ ಕಾಲೇಜಿನ ಒಳಿತಿಗಾಗಿ ಶ್ರಮಿಸಬೇಕು ಎಂದು ನುಡಿದರು. ಕಾಲೇಜಿನ ಪ್ರಾಶುಪಾಲ ಶಂಕರನಾರಾಯಣ ಭಟ್ ಎಸ್ ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ವಿದ್ಯಾರ್ಥಿ ನಾಯಕ ಜೇವನ್ ಕೆ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾದ ಚಿನ್ಮಯ ವಿಠ್ಠಲ್ ವಿ ಮಾತನಾಡಿ ಕರ್ತವ್ಯವನ್ನು ನಿರ್ವಹಿಸುವ ಭರವಸೆ ನೀಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಕುಮಾರಿ ನಾಝ್ ಎಂ.ಎನ್ ಹಾಗೂ ಜೊತೆ ಕಾರ್ಯದರ್ಶಿ ಲಾಸ್ಯ ವಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಚೈತ್ರಶ್ರೀ ಹಾಗೂ ನೇಹಾ ಎಂ ಪಿ ಪ್ರಾರ್ಥಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಕುಮಾರಿ ಗೀತಾ ಸಿ ಕೆ ಕಾರ್ಯಕ್ರಮ ನಿರೂಪಿಸಿ, ಗಣಿತಶಾಸ್ತ್ರ ಉಪನ್ಯಾಸಕ ತಿಲೋಶ್ ಕುಮಾರ್ ಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು