Sunday, November 24, 2024
ಸುದ್ದಿ

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀ ನಾರಾಯಣ ಭಟ್ಟರು ಇನ್ನಿಲ್ಲ-ಕಹಳೆ ನ್ಯೂಸ್

ಬೆಂಗಳೂರು – ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕನ್ನಡದ ಪ್ರಖ್ಯಾತ ಕವಿ ಎನ್.ಎಸ್.ಲಕ್ಷ್ಮೀ ನಾರಾಯಣ ಭಟ್ಟರು ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 4.45ರಲ್ಲಿ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದ ಎನ್.ಎಸ್.ಲಕ್ಷ್ಮೀ ನಾರಾಯಣ ಭಟ್ಟರು ಎಲ್ಲರಿಗೂ ಸಲ್ಲುವ ಕವಿ ಎಂದೇ ಖ್ಯಾತರಾಗಿದ್ದರು ಇವರ ನಿಧನದಿಂದ ಕನ್ನಡ ಕಾವ್ಯ ಹಾಗೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿವರಾಮ ಭಟ್ಟ ಮತ್ತು ಮೂಕಾಂಬಿಕೆ ದಂಪತಿಗಳ ಪುತ್ರರಾದ ಲಕ್ಷ್ಮೀ ನಾರಾಯಣ ಭಟ್ಟರು 1936 ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ಎಂಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ನಂತರ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ತುಂಬಾ ಹರಟುವ ಸ್ವಭಾವ, ಸರಳ-ಸಜ್ಜನಿಕೆ, ಅತ್ಯುತ್ತಮ ಸ್ಮರಣ ಶಕ್ತಿ ಇದ್ದ ನಾರಾಯಣ ಭಟ್ಟರು ತೀನಂಶ್ರೀ ಮಾರ್ಗದರ್ಶನದಲ್ಲಿ ಸಂಶೋಧನಾ ವೃತ್ತಿ ಕೈಗೊಂಡರು. 1965ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸೇರಿ, ಅಧ್ಯಾಪಕ, ರೀಡರ್, ಪ್ರಾಧ್ಯಾಪಕ, ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. 1990ರಲ್ಲಿ ಆರ್ಟ್ ಫ್ಯಾಕಲ್ಟಿ ಡೀನ್ ಆದರು. ಅಲ್ಲದೆ, ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‍ಡಿ ಪದವಿಗೆ ಆಧುನಿಕ ಕನ್ನಡ ಕಾವ್ಯ ಕುರಿತು ಪ್ರಬಂಧ ಸಾದರ ಪಡಿಸಿದರು. ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ನಾಡಿನ ಗಣ್ಯರು, ಕನ್ನಡಾಭಿಮಾನಿಗಳು ದುಃಖ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು