Monday, January 20, 2025
ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಂಡನೆಗೆ ಅಧಿವೇಶನ ಕರೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನವರಿ 27 ರಂದ ಬಿ ಎಸ್ ವೈ ಮತ್ತು ನಿರಾಣಿ ವಿರುದ್ಧ ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಪ್ರಕರಣ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಇಬ್ಬರ ವಿರುದ್ಧ ತನಿಖೆಗೆ ಆದೇಶಿಸಿತು. ಹೈಕೋರ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವ ನೈತಿಕತೆ ಇಲ್ಲ ಎಂದರು. ರಾಜ್ಯ ಸರ್ಕಾರ ಅನೈತಿಕತೆಯ ಮೂಟೆಯನ್ನೇ ಹೊತ್ತಿರುವ ಸರ್ಕಾರವಾಗಿದೆ. ರಮೇಶ್ ಜಾರಕಿಹೊಳಿ ಪ್ರಕರಣವಾಯಿತು. ಅದಾದ ಬಳಿಕ ಭಯದಿಂದ 6 ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ನಿಬರ್ಂಧ ತಂದಿದ್ದಾರೆ. ಸಚಿವರು ಏನೇ ತಪ್ಪು ಮಾಡಿದರೂ ಪ್ರಸಾರ ಮಾಡಬಾರದು ಎಂದು. ಅಂದರೆ ಏನೋ ತಪ್ಪು ಮಾಡಿದ್ದಾರೆ. ಅದಕ್ಕೇ ಕೋರ್ಟ್ ಮೊರೆ ಹೋಗಿದ್ದಾರೆ. ಒಟ್ಟಾರೆ ಇಡೀ ಸರ್ಕಾರಕ್ಕೆ ನೈತಿಕತೆ ಎಂಬುದು ಇಲ್ಲ. ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು