Monday, January 20, 2025
ಹೆಚ್ಚಿನ ಸುದ್ದಿ

ತೆರೆ ಕಾಣಲಿದೆ ಏಪ್ರಿಲ್‍ನಲ್ಲಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನೆಮಾ-ಕಹಳೆ ನ್ಯೂಸ್

ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಚಿತ್ರ ಏಪ್ರಿಲ್‍ನಲ್ಲಿ ತೆರೆಕಾಣಲಿದೆ. ಇಷ್ಟು ದಿನ ಪ್ರಚಾರದಿಂದ ದೂರವೇ ಉಳಿದುಕೊಂಡಿದ್ದ ಚಿತ್ರತಂಡ ಈಗ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಲು ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. ಚಿತ್ರದ ಹಾಡು ಮತ್ತು ಇತರ ದೃಶ್ಯಗಳ ಕುರಿತಾದ ಕೆಲವು ದೃಶ್ಯಗಳನ್ನು ಇಲ್ಲಿ ನೀಡಲಾಗಿದ್ದು, ಚಿತ್ರದ ಅದ್ಧೂರಿ ಮೇಕಿಂಗ್‍ನಿಂದ ಕೂಡಿರೋದು ಇಲ್ಲಿ ಎದ್ದು ಕಾಣುತ್ತಿದೆ. ಈಗಾಗಲೇ ಕೋಟಿಗೊಬ್ಬ-3 ಚಿತ್ರದಲ್ಲಿ ಪಟಾಕಿ ಪೋರೀಯೋ.. ಎನ್ನುವ ಹಾಡು ಬಿಡುಗಡೆಯಾಗಿ ಹಿಟ್ ಲಿಸ್ಟ್ ಸೇರಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆಯ ಈ ಹಾಡಿನಲ್ಲಿ ನಟಿ ಆಶಿಕಾ ರಂಗನಾಥ್ ಕೂಡಾ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗಾಗಿ ಕಲಾ ನಿರ್ದೇಶಕ ವಿಶೇಷ ವಿನ್ಯಾಸದ ಸೆಟ್ ನಿರ್ಮಿಸಿದ್ದು, ಅದ್ಧೂರಿ ಸೆಟ್‍ನಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಇನ್ನು ಕೋಟಿಗೊಬ್ಬ-3 ಚಿತ್ರದಲ್ಲಿ ಸುದೀಪ್‍ಗೆ ನಾಯಕಿಯಾಗಿ ಮಲೆಯಾಳಿ ಬೆಡಗಿ ಮಡೋನ್ನಾ ಸೆಬಾಸ್ಟಿಯನ್ ಜೋಡಿಯಾಗಿದ್ದಾರೆ. ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಸುದೀಪ್ ಕಾಣಿಸಿಕೊಂಡಿರುವ ಕೋಟಿಗೊಬ್ಬ-2 ಚಿತ್ರ ಹಿಟ್ ಆಗುವ ಮೂಲಕ ಈಗ ಕೋಟಿಗೊಬ್ಬ-3 ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು