Sunday, January 19, 2025
ಸುದ್ದಿ

ಯು.ಟಿ ಖಾದರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್.ಐ.ಆರ್

ಮಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬಂಟ್ವಾಳದ ಕೈರಂಗಳದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ ಹಾಗೂ ಗೋಗಳ್ಳರನ್ನು ಬಂಧಿಸುವಂತೆ ಒತ್ತಾಯಸಿ ಇತ್ತೀಚೆಗೆ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಸಂದರ್ಭದಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸಚಿವ ಯು.ಟಿ ಖಾದರ್ ವಿರುದ್ದ ವಾಗ್ದಾಳಿ ನಡೆಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವ ಯು.ಟಿ. ಖಾದರ್ ಒಬ್ಬ ಕೊಳಕು ಮನುಷ್ಯ. ಗೋಮಾಂಸ ಭಕ್ಷಣೆ ಮಾಡುವಂತಹ ಆ ವ್ಯಕ್ತಿಯನ್ನು ಪವಿತ್ರ ದೇವಾಲಯ ಹಾಗು ದೈವಸ್ಥಾನಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟುಸರಿ ಎಂದು ಹೇಳಿಕೆ ನೀಡಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಚುನಾವಣಾ ಆಯೋಗದ ಅನುಮತಿ ಪಡೆಯದೆ ಸಭೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಭಾಕರ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ 153 (ಎ) ಮತ್ತು ಆರ್.ಪಿ. ಆಕ್ಟ್ 125 ಅಡಿ ಎಫ್.ಐ.ಆರ್. ದಾಖಲಿಸಲಾಗಿದೆ.

https://youtu.be/R3xOhsbpgIw

ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಕೆಟ್ಟದಾಗಿ ಮಾತನಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಮಾತ್ರವಲ್ಲ, ಜಿಲ್ಲೆಯಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶಾಂತಿ ಕದಡುವ ಪ್ರಯತ್ನ ನಡೆಸಿದ್ದು ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.