Recent Posts

Sunday, January 19, 2025
ರಾಜಕೀಯ

ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ; ವದಂತಿಗಳಿಗೆ ತೆರೆ ಎಳೆದ ಎಸ್.ಎಂ. ಕೃಷ್ಣ – ಕಹಳೆ ನ್ಯೂಸ್

smkrishna
smkrishna

ಬೆಂಗಳೂರು : ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವದಂತಿಯನ್ನು ಎಸ್.ಎಂ. ಕೃಷ್ಣ ತಳ್ಳಿ ಹಾಕಿದ್ದಾರೆ. ಅವರು ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿ, ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂಬುವುದು ಕೇವಲ ಸುಳ್ಳು ಸುದ್ದಿ. ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳಿಸಲೆಂದು ಸಚಿವ ಡಿ.ಕೆ. ಶಿವಕುಮಾರ್, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು. ಯಾವುದೇ ಸಂದರ್ಭದಲ್ಲೂ ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದರು.

ನನ್ನ ಆರೋಗ್ಯ ಸಮಸ್ಯೆಯಿಂದ ಪಕ್ಷದ ಸಕ್ರಿಯ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ನನ್ನ ಆರೋಗ್ಯ ಸಹಕರಿಸಿದರೆ ಈ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಕೆಲವರು ನಮಗಾಗದವರು ಆಗಾಗ್ಗೆ ಇಂತಹ ವದಂತಿಗಳನ್ನು ಹಬ್ಬಿಸುತ್ತಾರೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲವೆಂದು ಕೃಷ್ಣ ವದಂತಿಗೆ ತೆರೆ ಎಳೆದಿದ್ದಾರೆ. ಇದೇ ವೇಳೆ ಬಿಜೆಪಿ ಪಕ್ಷದ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು