Monday, January 20, 2025
ಕುಂದಾಪುರ

ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ; ಗಗನ್ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕುಂದಾಪುರ ನ್ಯಾಯಾಲಯ-ಕಹಳೆ ನ್ಯೂಸ್

ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಫೆಬ್ರವರಿ 23 ರಂದು ರಾತ್ರಿ ಆರೋಪಿ ಗಗನ್ ಪೂಜಾರಿ ಎಂಬಾತ ಅಕ್ಷಯ್ ಮೊಗವೀರ ಎಂಬಾತನ ತಲೆಗೆ ರಾಡಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲ ನಡೆಸಿದ್ದ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಗಗನ್ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ನಂತರದಲ್ಲಿ ಕೋಟ ಠಾಣೆಯ ಪೊಲೀಸರು ಆರೋಪಿಯನ್ನು ತಲ್ಲೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದೀಗ ಆರೋಪಿ ಪರ ವಕೀಲರು ಕುಂದಾಪುರದ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಗಾಯಾಳು ಅಕ್ಷಯ್ ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯ ಕುರಿತು ಹೇಳಿಕೆ ನೀಡಲು ಸಮರ್ಥನಾಗಿರದ ಕಾರಣ ಜಾಮೀನು ಅರ್ಜಿಯನ್ನು ನ್ಯಾಯಾಧೀಶರಾದ ನರಹರಿ ಪ್ರಭಾಕರ ಮರಾಠೆ ಅವರು ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ಅವರು ವಾದ ಮಂಡಿಸಿದ್ದರು.