ಕೊಪ್ಪಳ: ಪರವಾನಗಿ ಇಲ್ಲದೇ ಬಿ.ಎಸ್.ಯಡಿಯೂರಪ್ಪ ಕರೆತಂದಿದ್ದ ಕಾರನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ನಗರದಲ್ಲಿ ರೈತ ಸಂವಾದ ಕಾರ್ಯಕ್ರಮಕ್ಕೆ ಬಿಎಸ್‍ವೈರನ್ನು ಹೆಲಿಪ್ಯಾಡ್‍ನಿಂದ ಸಂವಾದ ಸ್ಥಳಕ್ಕೆ ಪರವಾನಗಿ ಇಲ್ಲದ ಕಾರಲ್ಲಿ ಕರೆತಲಾಗಿತ್ತು. ಕಾರು ತಡೆಯಲು ಹೋದಾಗ ಕಾರು ಚಾಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ.
ಕಾರಿನ ಹಿಂಬದಿ ನಂಬರ್ ಪ್ಲೇಟಿನಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಹಾಕಲಾಗಿತ್ತು. ಪ್ರಕರಣ ಸಂಬಂಧ ಚುನಾವಣಾ ಅಧಿಕಾರಿ ಪರಶುರಾಮ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಬಿಜೆಪಿ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು, ಸಣ್ಣ- ಪುಟ್ಟ ಗೊಂದಲಗಳ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬಿಎಸ್ ವೈ ರಾಜ್ಯ ಸುತ್ತಲಿದ್ದು, ಮೊದಲನೇ ದಿನವಾದ ಮಂಗಳವಾರ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ರೈತರ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಕಷ್ಟ- ನಷ್ಟಗಳನ್ನು ಕೇಳಿ ತಿಳಿದುಕೊಂಡ್ರು.