Monday, January 20, 2025
ಹೆಚ್ಚಿನ ಸುದ್ದಿ

ಕೋಟ ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ-ಕಹಳೆ ನ್ಯೂಸ್

ಕೋಟ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು ಕೋಟತಟ್ಟು ಪಡುಕರೆ ನಿವಾಸಿ 51 ವರ್ಷದ ಚೆನ್ನಯ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಪಡುಕರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ಇರಿಸಿಕೊಂಡು ಜೀವನ ಸಾಗಿಸುತ್ತಿದ್ದ ಚೆನ್ನಯ್ಯ ಪೂಜಾರಿ ಇಂದು ಮುಂಜಾನೆ ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಚಂದ್ರ ಪೂಜಾರಿ ಎಂಬತಾ ತೆಕ್ಕಟ್ಟೆಯ ದೇವಸ್ಥಾನದೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ದೇವಳದ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು