ಉಳ್ಳಾಲ : ಉಳ್ಳಾಲದ ಕುಂಪಲ ಎಂಬಲ್ಲಿ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಸೋಮವಾರ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಕುಂಪಲ ಬಳಿಯ ಬಾರ್ದೆ ನಿವಾಸಿ 34 ವರ್ಷದ ಲವಿತ್ಕುಮಾರ್ ಎಂದು ತಿಳಿದುಬಂದಿದೆ. ಎಲೆಕ್ಟ್ರಿಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾ ಎಂಬಾ ಯುವತಿಯನ್ನು ವಿವಾಹವಾಗಿದ್ದರು. ಲವಿತ್ ಅವರಿಗೆ ಸೋಮವಾರ ರಾತ್ರಿ ತೀವ್ರ ಎದೆ ನೋವು ಕಾಣಿಸಿದ್ದು, ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ವತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ. ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ, ತಮ್ಮನ ಆಕ್ರಂದನ ಮುಗಿಲು ಮುಟ್ಟಿದ್ದು, ಅಂತ್ಯಕ್ರಿಯೆ ನಡೆಸಲಾಗಿದೆ.