Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬದುಕು ಕಟ್ಟೋಣ ತಂಡದಿಂದ ಮಾ.14ಕ್ಕೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಉಜಿರೆ : ಉಜಿರೆ ಜನಾರ್ದನ ಸ್ವಾಮಿ ಸೇವಾ ಸಮಿತಿಯ ನೇತೃತ್ವದಲ್ಲಿ ಪ್ರಾರಂಭಗೊಂಡ ಬದುಕು ಕಟ್ಟೋಣ ತಂಡ ಇಲ್ಲಿಯವರೆಗೂ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ, ನಿರ್ಗತಿಕರ ಬಾಳಿಗೆ ದಾರಿದೀಪವಾಗಿದೆ.

ಇದೀಗ ಬದುಕು ಕಟ್ಟೋಣ ತಂಡದ ವತಿಯಿಂದ ಮಾ.೧೪ರಂದು ಬೃಹತ್ ರಕ್ತದಾನ ಶಿಬಿರ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು, ಮಂಗಳೂರಿನ ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ ಹಾಸ್ಪೆಟಲ್ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಈ ಶಿಬಿರವನ್ನು ಹಮ್ಮಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಉದ್ಘಾಟನೆಯನ್ನು ಶ್ರೀ ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ ಯಶೋವರ್ಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ.ಬಿ.ಕೆ ಧನಂಜಯ ರಾವ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪ್ ಸಿಂಹ ನಾಯಕ್ ಹಾಗೂ ಕೆ.ಹರೀಶ್ ಕುಮಾರ್ ಮತ್ತು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡ್ವೆಟ್ನಾಯ ಭಾಗವಹಿಸಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು