ಪುತ್ತೂರು : ಪುತ್ತೂರಿನ ಸಾಲ್ಮರ ಊರಮಾಲ್ ಎಂಬಲ್ಲಿ ಮಾರ್ಚ್ 10 ರಂದು ಗೋಡಂಬಿ ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಬಾಲಕ ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷ ಪ್ರಾಯದ ಪುತ್ರ. ಈತ ಮನೆಯಲ್ಲಿ ಬುಧವಾರ ಗೋಡಂಬಿ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದು, ತಕ್ಷಣವೇ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಈ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಸಾಲ್ಮರ ಸಯ್ಯದ್ ಮಲೆ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಸಲಾಯಿತು. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.