Monday, January 20, 2025
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ, ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ;ಡಾ. ಶ್ರೀಶ ಭಟ್-ಕಹಳೆ ನ್ಯೂಸ್

ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ.ಶ್ರೀಶ ಭಟ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ. ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತು ರೂಪವೇ ಮಾನವನಾಗಿರುತ್ತಾನೆ. ವ್ಯಕ್ತಿತ್ವವೆಂಬುದು ಹುಟ್ಟಿನಿಂದ ಸಾವಿನವರೆಗೆ ರೂಪುಗೊಳ್ಳುತ್ತಿರುತ್ತದೆ. ಇದರಲ್ಲಿ ಉತ್ತಮ ಸಂಸ್ಕøತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು. ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಬೆಳೆಸಿಕೊಂಡಾಗ ನಾವು ಹೃದಯವಂತರಾಗಬಹುದು. ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಆರಂಭಿಸುವುದು ಯಶಸ್ಸಿನ ಹಾದಿಯಲ್ಲಿ ಸಾಗುವ ಮೊದಲ ಹೆಜ್ಜೆ ಎಂದರು. ಸಮಾರಂಭದ ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ ವಿವೇಕಾನಂದ ಪದವಿ ಕಾಲೇಜಿನ ವ್ಯವಹಾರ ನಿರ್ವಹಣೆಯ ಸ್ನಾತಕ ಪದವಿ ವಿಭಾಗದ ಮುಖ್ಯಸ್ಥೆ ರೇಖಾ ಮಾತನಾಡಿ ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ.

ಆದರ್ಶ, ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮಥ್ರ್ಯ, ವೃತ್ತಿಪ್ರಿಯತೆ, ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು. ಜೀವನದಲ್ಲಿ ಗುರಿ ಸ್ಪóಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ಪಿಯುಸಿ ನಂತರ ಲಭ್ಯವಿರುವ ವಿವಿಧ ಕೋರ್ಸ್‍ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಕನ್ನಡ ವಿಭಾಗದ ಉಪನ್ಯಾಸಕಿ ಪುಷ್ಪಲತಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್‍ರೈ ಅತಿಥಿಗಳನ್ನು ಸ್ವಾಗತಿಸಿ ಉಪನ್ಯಾಸಕ ಅಜಯ್‍ಶಾಸ್ತ್ರೀ ವಂದಿಸಿದರು.