ಶಿಕಾರಿಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದ, ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಅವರು ತಮ್ಮ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.