Friday, January 31, 2025
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ನಗರದ ಬಿಎಸ್ ಎನ್ ಎಲ್ ಕಚೇರಿಯಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರೀ ದುರಂತ-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಬೆಲ್ಟ್ ರಸ್ತೆಯಲ್ಲಿರುವ ಶಂಕರಪುರದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬಿಎಸ್ ಎನ್ ಎಲ್ ಕೇಂದ್ರ ಕಚೇರಿಯಲ್ಲಿನ ಕೇಬಲ್ ವೈರಲ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ 8 ಗಂಟೆಯ ಸುಮಾರಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಸ್ಎನ್ ಎಲ್ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂಧಿಗಳಿಗೆ ಸುದ್ದಿ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಎಸ್ ಎನ್ ಎಲ್ ಕಚೇರಿಯಲ್ಲಿದ್ದ ಕೇಬಲ್ ವೈರ್ ಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಆದರೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ನಡೆಯುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ಇನ್ನು ಬಿಎಸ್ ಎನ್ ಎಲ್ ಕಚೇರಿಯ ಪಕ್ಕದಲ್ಲಿ ಮರದ ಎಲೆಗಳಿಗೆ ಬೆಂಕಿ ಹಾಕಲಾಗಿದ್ದು, ಇದೇ ಬೆಂಕಿಯ ಕಿಡಿಯಿಂದಲೇ ಅಗ್ನಿ ಅವಘಡ ಸಂಭವಿಸಿದೆಯಾ. ಇಲ್ಲಾ ಬೇರೆಯ ಕಾರಣಗಳಿಂದ ಈ ದುರಂತ ಸಂಭವಿಸಿದೆಯಾ ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ.