Monday, January 20, 2025
ಬೆಂಗಳೂರು

SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿನಾಯತಿ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ ಎಸ್ಎಎಸ್ ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ. ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಪಾಲಕರು ಮತ್ತು ಕೆಲವು ವಿದ್ಯಾರ್ಥಿಗಳಿಗಿದ್ದ ಸಂಶಯ ಈ ಮೂಲಕ ಪರಿಹಾರವಾಗಿದ್ದು, ಪರೀಕ್ಷಾ ಪಾವತಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆಯಬಹುದಾಗಿದೆ.