Monday, January 20, 2025
ಪುತ್ತೂರು

ಅಂಬಿಕಾದಲ್ಲಿ ಸಿ.ಎ ಪೌಂಡೇಶನ್ ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ವರ್ತಮಾನ ದಿನಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳಿಗೆ ಅಧಿಕ ಬೇಡಿಕೆ ಇದೆ. ಆದರೆ ಇದನ್ನು ಆಯ್ಕೆ ಮಾಡುವವರ ಸಂಖ್ಯೆ ಇನ್ನೂ ವೃದ್ಧಿಯಗಬೇಕಿದೆ ಎಂದು ಚಾರ್ಟರ್ಡ್ ಅಕೌಂಟೆಂಟ್ ಅರವಿಂದ ಕೃಷ್ಣ ಅವರು ಅಂಬಿಕಾದಲ್ಲಿ ಸಿ.ಎ ಪೌಂಡೇಷನ್ ತರಗತಿಯನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸುವುದರ ಜತೆಗೆ ಪರೀಕ್ಷೆಗಳನ್ನು ಹೇಗೆ ಎದುರಿಸಬಹುದೆನ್ನುವುದರ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಟ್ಟೋಜ ಪೌಂಡೇಷನ್ ಟ್ರಸ್ಟ್‍ನ ಕಾರ್ಯದರ್ಶಿ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ನಟ್ಟೋಜರು ಮುಖ್ಯ ಅಥಿತಿ ಸಂಪನ್ಮೂಲ ವ್ಯಕ್ತಿ ಅರವಿಂದ ಕೃಷ್ಣ ಅವರನ್ನು ಪರಿಚಯಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಪ್ರಾಚಾರ್ಯರಾದ ಶ್ರೀಮತಿ ರಾಜಶ್ರೀ ಎಸ್ ನಟ್ಟೋಜ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕರು, ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಅನ್ಮಯ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು