Monday, January 20, 2025
ಹೆಚ್ಚಿನ ಸುದ್ದಿ

ಒಂದೇ ವಾರದಲ್ಲಿ 8 ಸಾವಿರ ಕೋಳಿಗಳ ಸಾವು ; ರಾಜ್ಯದಲ್ಲಿ ಮತ್ತೆ ಶುರುವಾಯ್ತು ಹಕ್ಕಿಜ್ಚರದ ಭೀತಿ..!!-ಕಹಳೆ ನ್ಯೂಸ್

ದಾವಣಗೆರೆ : ಕಳೆದೊಂದು ವಾರದಲ್ಲಿ ಬರೋಬ್ಬರಿ 8 ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ್ದು, ಕೊರೊನಾ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ ಕಳೆದೊಂದು ವಾರದ ಅವಧಿಯಲ್ಲಿ ಬರೋಬ್ಬರಿ 8 ಸಾವಿರ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕೋಳಿ ಫಾರಂ ಮಾಲೀಕರು ಸತ್ತ ಕೋಳಿಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸದೆಯೇ ವಿಲೇವಾರಿ ಮಾಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕೋಳಿಗಳು ಸಾವನ್ನಪ್ಪಿರೋ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ಕೋಳಿಗಳ ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು