Recent Posts

Sunday, January 19, 2025
ರಾಜಕೀಯ

ಶನಿವಾರ ಬಿಜೆಪಿ 2ನೇ ಟಿಕೆಟ್‌ ಪಟ್ಟಿ – ಬಿಎಸ್‌ವೈ

ಬೆಂಗಳೂರು : ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 72 ಅಭ್ಯರ್ಥಿಗಳ ಮೊದಲ ಪಟ್ಟಿಬಿಡುಗಡೆ ಮಾಡಲಾಗಿದೆ. ಈ ಪೈಕಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಅದು ಸುಮಾರು 70ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಳ ಗೊಂಡಿರುತ್ತದೆ. ನಂತರ ಮೂರನೇ ಹಂತದ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಕಾಂಗ್ರೆಸ್ಸಿನ ಮೊದಲ ಪಟ್ಟಿಬಿಡುಗಡೆ ನಂತರ ಪಕ್ಷದ ಎರಡನೇ ಹಂತದ ಪಟ್ಟಿಬಿಡುಗಡೆ ಮಾಡುವುದು ಉತ್ತಮ ಎಂಬ ಅಭಿಪ್ರಾಯವೂ ಪಕ್ಷದಲ್ಲಿ ವ್ಯಕ್ತವಾಗಿದೆ.