Tuesday, January 21, 2025
ಹೆಚ್ಚಿನ ಸುದ್ದಿ

ಮನೆ ಬಿಟ್ಟು ತೆರಳಿದ ಕೋಡಿಂಬಾಳದ ಯುವಕನ ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ-ಕಹಳೆ ನ್ಯೂಸ್

ಕೋಡಿಂಬಾಳ : ಕೋಡಿಂಬಾಳ ಗ್ರಾಮದಿಂದ ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಪತ್ತೆಯಾದ ಯುವಕ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ 25 ವರ್ಷದ ದೇವಿಪ್ರಸಾದ್ ಎಂದು ತಿಳಿದುಬಂದಿದೆ. ಕಡಬ ಪೇಟೆಯಲ್ಲಿ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇವಿಪ್ರಸಾದ್ ಮಾರ್ಚ್ 09 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗಿರಬಹುದೆಂದು ಶಂಕಿಸಲಾಗಿದೆ. ಯುವಕನ ಬಗ್ಗೆ ಮಾಹಿತಿ ಕಂಡುಬಂದಲ್ಲಿ ಕಡಬ ಪೊಲೀಸ್ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಕಡಬ ಠಾಣಾ ಪ್ರಕಟಣೆ ತಿಳಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು