Tuesday, January 21, 2025
ಹೆಚ್ಚಿನ ಸುದ್ದಿ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ಮನವಿ-ಕಹಳೆ ನ್ಯೂಸ್

ತಾಳಿಕೋಟೆ : ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವು ಅತಿ ಹಿಂದುಳಿದ ಸಮುದಾಯವಾಗಿದ್ದು ಸಾಮಾಜಿಕ ವ್ಯವಸ್ಥೆಯಲ್ಲಿ ಅಸಪೃಶ್ಯತೆಯ ಬದುಕು ಸಾಗಿಸುತ್ತಿದ್ದಾರೆ. ರಾಜ್ಯದಲ್ಲಿ ಅತಿ ಸಣ್ಣ ಸಮುದಾಯ ಇದಾಗಿದ್ದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದ ಸಮುದಾಯವಾಗಿದೆ. ಕರ್ನಾಟಕದಲ್ಲೂ ಕ್ಷತ್ರಿಯ ಕಲಾಲ ಖಾಟೀಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಕೋರಿ ತಾಲೂಕಾ ದಂಡಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಮನವಿ ಪತ್ರವನ್ನು ನೀಡಿದರು. ಈಗಾಗಲೇ ಮಹಾರಾಷ್ಟ್ರ,  ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ್, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಉತ್ತರಾಚಲ, ಸೇರಿದಂತೆ 13 ರಾಜ್ಯದಲ್ಲಿ ನಮ್ಮ ಸಮುದಾಯ ಪರಿಶಿಷ್ಟ ಪಂಗಡದಲ್ಲಿ ಸೇರ್ಪಡೆಯಾಗಿದೆ. ಈ ಸಂದರ್ಭದಲ್ಲಿ ಸಿದ್ದಪ್ಪ ಲಕ್ಷ್ಮಣ ರಾಜಪುರ್, ಕೃಷ್ಣಾಜಿ ಲಕ್ಷ್ಮಣ್ ರಾಜಪುರ್, ಅಶೋಕ್ ಲಕ್ಷ್ಮಣ್ ರಾಜಪುರ್, ಪ್ರಕಾಶ ಕೃಷ್ನಾಜಿ ರಾಜಪುರ, ಶ್ರೀನಿವಾಸ್ ಸೈದಪ್ಪ ರಾಜಾಪುರ, ಮುಂತಾದವರು ಉಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು