Monday, January 20, 2025
ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಳ ; ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 710 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,12,699ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ 9,428 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 129 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.