Monday, January 20, 2025
ಬೆಂಗಳೂರು

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಬೋರ್ಡ್ ಮಹತ್ವದ ಸುತ್ತೋಲೆ..!-ಕಹಳೆ ನ್ಯೂಸ್

ಬೆಂಗಳೂರು : ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಪ್ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಬೋರ್ಡ್, ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದು, ಆದರೆ, ಅಝಾನ್‍ಗೆ ಯಾವುದೇ ನಿಬರ್ಂಧ ಇಲ್ಲ ಎಂದು ತಿಳಿಸಿದೆ. ಅಲ್ಲದೇ ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಮತ್ತು ಕರ್ನಾಟಕ ಮುಸ್ಲಿಂ ಜಮಾತ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಾದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ವಕ್ಪ್ ಬೋರ್ಡ್ ಸೂಚನೆಯನ್ನು ನೀಡಿದೆ. ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್ ಬೋರ್ಡ್ ಸಭೆ ನಡೆಸಿತ್ತು. ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು.

ವಕ್ಫ್ ಬೋರ್ಡ್ ಹೊರಡಿಸಿರುವ ಸುತ್ತೋಲೆಯಲ್ಲೇನಿದೆ ?

ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸಬಾರದು.
ಧ್ವನಿವರ್ಧಕವನ್ನು ಅಝಾನ್ ಮತ್ತು ಸಾವು, ಸಮಾಧಿಯ ಸಮಯ, ಚಂದ್ರನನ್ನು ನೋಡುವುದು ಸೇರಿದಂತೆ ಇನ್ನಿತರ ಪ್ರಮುಖ ಘೋಷಣೆಗಳಿಗೆ ಮಾತ್ರ ಬಳಸಬೇಕು.
ಹಗಲಿನಲ್ಲಿ ಬಳಸುವ ಧ್ವನಿವರ್ಧಕಗಳು ಶಬ್ದಕ್ಕೆ ಸಂಬಂಧಿಸಿದಂತೆ ಸುತ್ತುರಿದ ಗಾಳಿಯ ಗುಣಮಟ್ಟದ ಮಾನದಂಡಗಳ ಪ್ರಕಾರ ಇರಬೇಕು.
ಯಾವುದೇ ಸಂದರ್ಭದಲ್ಲಿ ಶಬ್ದಗಳನ್ನು ಹೊರಸೂಸುವ ಪಟಾಕಿಗಳನ್ನು ಮಸೀದಿ, ದರ್ಗಾದ ಆವರಣದಲ್ಲಿ ಸುಡಬಾರದು.
ಲಾತ್, ಜುಮಾ ಖುತ್ಬಾ, ಬಯಾನ್ಸ್, ಧಾರ್ಮಿಕ ಇನ್ನಿತರ ಕಾರ್ಯಕ್ರಮಗಳಿಗೆ ಮಸೀದಿ ಅಥವಾ ದರ್ಗಾದ ಆವರಣದೊಳಗೆ ಇರುವ ಮೈಕ್‍ಗಳನ್ನು ಬಳಸಬೇಕು.