ಪಶ್ಚಿಮ ಆಫ್ರಿಕಾದ ನೈಜರ್ ದೇಶದ ರಾಜಧಾನಿ ನಿಯಾಮೆ ಸಮೀಪದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 58 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಮಾಲಿಯ ಗಡಿಯಲ್ಲಿ ಈ ದಾಳಿ ನಡೆದಿದ್ದು, ಸರ್ಕಾರಿ ಬಸ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ ಎಂದು ನೈಜರ್ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾನಿಬಂಗಸ್ ಪಟ್ಟಣಕ್ಕೆ ಹೊಂದಿಕೊಂಡಿರುವ ಚಿನೆಡೋಗರ್ ಹಳ್ಳಿಯ ಸಮೀಪದಲ್ಲಿ ಈ ದಾಳಿ ನಡೆದಿದ್ದು, ನಾಲ್ಕು ವಾಹನಗಳಲ್ಲಿ ಬಂದಿದ್ದ ಉಗ್ರರು ಬಸ್ ಅನ್ನು ಅಡ್ಡಗಟ್ಟಿ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 58 ಜನರು ಮೃತಪಟ್ಟಿದ್ದಾರೆ ಎಂದು ನೈಜರ್ ಪೊಲೀಸರು ತಿಳಿಸಿದ್ದಾರೆ. ಉಗ್ರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ. ಈವರೆಗೂ ಯಾವುದೇ ಉಗ್ರಗಾಮಿ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ ಎಂದು ಎನ್ಡಿಟಿವಿ ವರದಿ ಮಾಡಿದೆ.