ಮಾಸ್ಕ್ ಧರಿಸದಿದ್ರೆ 6 ತಿಂಗಳು ಜೈಲು ಶಿಕ್ಷೆ ; ಕಠಿಣ ರೂಲ್ಸ್ ಜಾರಿ ಮಾಡಿದ ಜಿಲ್ಲಾಧಿಕಾರಿ-ಕಹಳೆ ನ್ಯೂಸ್
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಗಳು ಕಠಿಣ ರೂಲ್ಸ್ ಗಳನ್ನು ಜಾರಿಗೆ ತರುತ್ತಿವೆ. ಅದ್ರಲ್ಲೂ ದೇಶದ ಜಿಲ್ಲೆಯೊಂದರ ಜಿಲ್ಲಾಧಿಕಾರಿಗಳು ಮಾಸ್ಕ್ ಧರಿಸದವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.
ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದೆ. ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಕೊರೊನಾ ಭೀತಿ ಎದುರಾಗಿದೆ. ಅದ್ರಲ್ಲೂ ಕರ್ನಾಟಕದಲ್ಲಿ ಈಗಾಗಲೇ 2ನೇ ಅಲೆ ಹೆಚ್ಚಿದ್ದು, ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನೂ ಹೊರಡಿಸಿದೆ. ಈ ನಡುವಲ್ಲೇ ಇದೀಗ ತಮಿಳುನಾಡು ರಾಜ್ಯದ ನೀಲಗಿರೀಸ್ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ನಿಲಗೀರಿಸ್ ಜಿಲ್ಲೆಯ ಜಿಲ್ಲಾಧಿಕಾರಿ ಜೆ. ಇನ್ನೋಸೆಂಟ್ ದಿವ್ಯಾ ಅವರು ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಹೊಸ ರೂಲ್ಸ್ ಜಾರಿಗೆ ತಂದಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ 200 ರೂಪಾಯಿ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸುವ ಕುರಿತಂತೆ ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನ ನಿಲಗಿರೀಸ್ ಜಿಲ್ಲೆ ಪ್ರಮುಖ ಪ್ರವಾಸಿ ತಾಣವೂ ಆಗಿರೋದ್ರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಹೊರ ರಾಜ್ಯಗಳಿಂದ ಬರುವವರಿಂದಲೇ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂತಹ ರೂಲ್ಸ್ ಜಾರಿಗೆ ತಂದಿದೆ ಎನ್ನಲಾಗುತ್ತಿದೆ.