Recent Posts

Monday, April 14, 2025
ಉಡುಪಿ

ಉಡುಪಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ ; 30 ಸಾವಿರ ರೂ. ಮೌಲ್ಯದ ಗಾಂಜಾ ವಶ-ಕಹಳೆ ನ್ಯೂಸ್

ಉಡುಪಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ 23 ವರ್ಷದ ಕೆ ಎಸ್ ಗೌತಮ್ ಗೌಡ ಮತ್ತು ಬೆಳಗಾವಿ ನಿವಾಸಿ 21 ವರ್ಷದ ವಿಕ್ಕಿ ದಯಾಳ್ ಅಲಿಯಾಸ್ ವಿಕ್ಕಿ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾರ್ಚ್ 16ರಂದು ಮಧ್ಯಾಹ್ನ 1.30ರ ಸುಮಾರಿಗೆ ಉಡುಪಿಯ ಕುಂಜಿಬೆಟ್ಟು ಕೆಇಬಿ ವಸತಿ ಗೃಹದ ಬಳಿ ಇರುವ ವಿಮಲಾ ಪದ್ಮನಾಭ ಕಟ್ಟಡದ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ದೊರೆತ ಮಾಹಿತಿಯಂತೆ ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್ ಅವರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೆಂಪು ಪ್ಲಾಸ್ಟಿಕ್ ತೊಟ್ಟೆಯಲ್ಲಿದ್ದ 1,050 ಗ್ರಾಂ ತೂಕದ ಸುಮಾರು 30,000 ರೂ. ಮೌಲ್ಯದ ಗಾಂಜಾ, 20,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ