ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ನೋಟಿಸ್ ನೀಡಿದೆ.
ಸಾರಿಗೆ ನೌಕರರ 9 ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಾರಿಗೆ ಸಚಿವ, ನಾಲ್ಕು ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮುಷ್ಕರದ ನೋಟಿಸ್ ನೀಡಲಾಗಿದೆ. ಸಾರಿಗೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ 10 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಡಿಸೆಂಬರ್ 11 ರಿಂದ 14 ರವರೆಗೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಈ ವೇಳೆ 10 ಬೇಡಿಕೆಗಳ ಈಡೇರಿಕೆಗೆ 3 ತಿಂಗಳ ಗಡುವು ನೀಡಲಾಗಿತ್ತು.