Tuesday, January 21, 2025
ಹೆಚ್ಚಿನ ಸುದ್ದಿ

ಬಾಗೇಪಲ್ಲಿಯಲ್ಲಿ ಮಾರ್ಚ್ 20 ರಂದು ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಯೋಜನೆಯ ಗ್ರಾಮವಾಸ್ತವ್ಯ ಕಾರ್ಯಕ್ರಮ; ತಹಶೀಲ್ದಾರ್ ಡಿ.ಎ.ದಿವಾಕರ್ -ಕಹಳೆ ನ್ಯೂಸ್‍

ಬಾಗೇಪಲ್ಲಿ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಯೋಜನೆಯ ಗ್ರಾಮವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮಾರ್ಚ್ 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರಿಗೆ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿ ಗೊರ್ತಪಲ್ಲಿ ಗ್ರಾಮದಲ್ಲಿ ಬಾಗೇಪಲ್ಲಿ ತಾಲೂಕಿನ ತಹಶಿಲ್ದಾರ್ ಡಿ.ಎ.ದಿವಾಕರ್ ವಾಸ್ತವ್ಯ ಹೂಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಹಶೀಲ್ದಾರ್ ಗ್ರಾಮ ವಾಸ್ತವ್ಯದಲ್ಲಿ ಪಂಚಾಯತಿ ವ್ಯಾಪ್ತಿಯ ಜಮೀನುಗಳ ಪಹಣಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ವ್ಯಾಜ್ಯಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ನೀಡುವುದು, ಸ್ಮಶಾನಕ್ಕೆ ಜಾಗ ನಿಗದಿಪಡಿಸುವುದು, ಆಶ್ರಯಯೋಜನೆಗೆ ಜಮೀನನ್ನು ಕಾಯ್ದಿರಿಸುವುದು, ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು, ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಮತದಾರ ಪಟ್ಟಿ ಪರಿಷ್ಕರಣೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಲಿಕಾಕ್ರಮ ಪರಿಶೀಲನೆ, ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡುವುದು, ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದು ಹಾಗೂ ಗ್ರಾಮದ ಮೂಲಭೂತ ಸೌಕರ್ಯಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಸೇರಿದಂತೆ ಗ್ರಾಮೀಣ ಜನತೆಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಮಹತ್ವಾಕಾಂಕ್ಷೆಯನ್ನು ಯೋಜನೆಗಳನ್ನು ಸದ್ಭಳಿಕೆ ಮಾಡಿಕೊಳ್ಳಲು ಬಾಗೇಪಲ್ಲಿ ತಾಲೂಕು ತಹಶಿಲ್ದಾರ್ ಈ ಮೂಲಕ ಪತ್ರಿಕೆ ಮುಕಾಂತರ ಕೋರಿದ್ದಾರೆ.