Thursday, January 23, 2025
ಹೆಚ್ಚಿನ ಸುದ್ದಿ

ಹಾವೇರಿ ಜಿಲ್ಲೆಯಲ್ಲಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ; 35 ಪ್ರಯಾಣಿಕರಿಗೆ ಗಾಯ-ಕಹಳೆ ನ್ಯೂಸ್

ಹಾವೇರಿ : ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದ ಪರಿಣಾಮ 35 ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಗೊಂಡ 35 ಪ್ರಯಾಣಿಕರನ್ನು ಬ್ಯಾಡಗಿ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗದಗದಿಂದ ರಾಣೆಬೆನ್ನೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬ್ರೇಕ್ ಫೇಲ್ ಆದ ಬಸ್ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ ಗಾಯಾಳುಗಳು ಕೆಲ ಹೊತ್ತು ಪರದಾಡುವ ಸ್ಥಿತಿ ಎದುರಾಗಿತ್ತು. ಬಸ್‍ನಲ್ಲಿ ಜೋರಾಗಿ ಸದ್ದು ಬಂದ ತಕ್ಷಣವೇ ಬಸ್ ಚಾಲಕ ಬಸ್ ಅನ್ನು ನಿಲ್ಲಿಸಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಬ್ರೇಕ್ ಫೇಲ್ ಆಗಿದ್ದು, ತುಳಿದು ನಿಲ್ಲಿಸಲು ಯತ್ನಿಸಿದಾಗ ಬಸ್ ರಸ್ತೆಯ ಪಕ್ಕದಲ್ಲಿ ಪಲ್ಟಿಯಾಗಿದೆ. ಬ್ಯಾಡಗಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು