Friday, January 24, 2025
ಸುದ್ದಿ

ಮಂಗಳೂರಿನ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ-ಕಹಳೆ ನ್ಯೂಸ್

ಮಂಗಳೂರು : ನಗರದ ಹೊರವಲಯದಲ್ಲಿರುವ ನರ್ಸಿಂಗ್  ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಹಾಸ್ಟೆಲ್ ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ಕೊವಿಡ್ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು ಆದರೆ ಇದೀಗ ಮತ್ತೆ ಕೊರೊನಾ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬುಧವಾರ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆರ್.ಟಿ-ಪಿಸಿಆರ್ ಪರೀಕ್ಷೆ ಮಾಡುತ್ತಿದ್ದ ವೇಳೆ ಬರೋಬ್ಬರಿ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಹಿಂದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಮಂಗಳೂರಿನಲ್ಲಿ ಶಿಕ್ಷಣ ಕೇಂದ್ರಗಳು ಸಾಕಷ್ಟಿವೆ . ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‍ಲೈನ್ಸ್ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು