Friday, January 24, 2025
ಪುತ್ತೂರು

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ; ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನ್ವಿತ್ ಆರ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಿದ್ಧಕಟ್ಟೆಯ ಗುಣಶ್ರೀ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡವನ್ನು ಪ್ರತಿನಿಧಿಸಿದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಧನ್ವಿತ್ ಆರ್ ರೈ ಇವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈತನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ರಘುರಾಮ ರೈ ಮತ್ತು ರೇಣುಕಾ ಆರ್ ರೈ ದಂಪತಿಗಳ ಪುತ್ರ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಯು ತರಬೇತಿಯನ್ನು ಪಡೆದಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು